ಜನ ಸಾಮಾನ್ಯರಿಗೆ ಮತ್ತಷ್ಟು ಶಾಕ್: ಏರಿಕೆಯಾದ ಪೆಟ್ರೋಲ್, ಡಿಸೇಲ್!
ಬೆಂಗಳೂರು: ಕೇಂದ್ರ ಸರ್ಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತರಾಮನ್ ಇಂದು ಬಜೆಟ್ ಮಂಡಿಸಿದ ಬೆನ್ನಲ್ಲೆ ಜನ ಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಬಿದ್ದಿದೆ.
ಪ್ರತಿ ಲೀಟರ್ ಪೆಟ್ರೋಲ್ ಗೆ 2.5 ರು ಹಾಗೂ ಡೀಸೆಲ್ ಗೆ 4 ರುಪಾಯಿ ಏರಿಕೆಯಾಗಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಪೆಟ್ರೋಲ್ ಮೇಲೆ 2.5 ರೂಪಾಯಿ ಕೃಷಿ ಸೆಸ್, ಡೀಸೆಲ್ ಮೇಲೆ 4 ರೂಪಾಯಿ ಕೃಷಿ ಸೆಸ್ ವಿಧಿಸಲು ಸರಕಾರ ಮುಂದಾಗಿದೆ. ಇದರಿಂದ ಎರಡೂ ತೈಲಗಳ ದರ ಏರಲಿದೆ.
ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಬ್ರಾಂಡ್ ಅಲ್ಲದ ಪ್ರತಿ ಲೀಟರ್ ಪೆಟ್ರೋಲ್ ಗೆ 1.4 ರು ಮತ್ತು ಡೀಸೆಲ್ ಗೆ 1.8 ರು ಅಬಕಾರಿ ಶುಂಕ ವಿಧಿಸಲಾಗಿದೆ. ಬ್ರಾಂಡೆಡ್ ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ ಲೀಟರ್‌ಗೆ 11 ಮತ್ತು 8 ರೂ. ಶುಂಕ ವಿಧಿಸಲಾಗಿದೆ.
ಕೇಂದ್ರ ಸರ್ಕಾರ ಇದೀಗ ಮತ್ತೆ ತೈಲದ ಮೇಲಿನ ಸೆಸ್ ಏರಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಜರಿಗೆ ಮತ್ತಷ್ಟು ಹೊರೆ ನೀಡಿದೆ. ಈ ಮೂಲಕ ದಿನ ನಿತ್ಯದ ಬೆಲೆಯೂ ಏರಿಕೆಯಾಗಲಿದ್ದು, ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ.