ಡಿಜಿಟಲ್ ಜನಗಣತಿಗೆ 3,768 ಕೋಟಿ ರೂ. ಮೀಸಲು
ನವದೆಹಲಿ: ದೇಶದ ಮೊಟ್ಟ ಮೊದಲ ಡಿಜಿಟಲ್ ಜನಗಣತಿಗೆ ಕೇಂದ್ರ ಸರ್ಕಾರ 3,768 ಕೋಟಿ ರೂ ಹಣವನ್ನು ಮೀಸಲಿಟ್ಟಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಸಂಸತ್ ನಲ್ಲಿ ಇಂದು ಕೇಂದ್ರ ಬಜೆಟ್ 2021ರ ಘೋಷಣೆ ವೇಳೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿಯನ್ನು ಘೋಷಣೆ ಮಾಡಿದರು. ಅಂತೆಯೇ ಈ ಡಿಜಿಟಲ್ ಜನಗಣತಿಗಾಗಿ ಕೇಂದ್ರ ಸರ್ಕಾರವು 3,768 ಕೋಟಿ ಮೀಸಲಿಡಲಿದೆ ಎಂದು ಹೇಳಿದರು.
‘ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯಲಿದೆ. ಈ ಐತಿಹಾಸಿಕ ಕಾರ್ಯಕ್ಕಾಗಿ 3,768 ಕೋಟಿ ರೂ.ಗಳನ್ನು ಮೀಸಲಿಡುತ್ತೇವೆ ಎಂದು ಹೇಳಿದರು.
ಇನ್ನು ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದರು. ಕೋವಿಡ್-19 ನಿಮಯಗಳು ಜಾರಿಯಲ್ಲಿರುವುದರಿಂದ ಬಜೆಟ್ ಪ್ರತಿಗಳನ್ನು ಮುದ್ರಿಸಲಾಗುತ್ತಿಲ್ಲ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಬಳಿಕ ಸಾಫ್ಟ್ ಕಾಪಿಗಳನ್ನು ಸಂಸದರಿಗೆ ಹಂಚಲಾಗುವುದು. ಸಾರ್ವಜನಿಕರು ಆ್ಯಪ್ ಮೂಲಕವೂ ಬಜೆಟ್ ಪ್ರತಿಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ ಎಂದು ಹೇಳಿದರು.