ಕೊರೋನಾ ಆರ್ಭಟಕ್ಕೆ ಮಹಾರಾಷ್ಟ್ರ ತತ್ತರ: 90 ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿನಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 90 ಸಾವಿರ ಗಡಿ ದಾಟಿದೆ.
ಹೌದು..ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯತ 2,259 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 90,787ಕ್ಕೆ ಏರಿಕೆಯಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಒಟ್ಟು ಇಂದು 120 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 3,289ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಈ ವರೆಗೂ 42,638 ಮಂದಿ ಸೋಂಕಿತರು ಗುಣಮುಖರಾಗಿದ್ದು, 48,149 ಸಕ್ರಿಯ ಪ್ರಕರಣಗಳಿವೆ.
ಮುಂಬೈ ಮಹಾನಗರಿಯಲ್ಲಿ 51,100ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಸೋಂಕಿತರ ಸಂಖ್ಯೆ 51,100ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಕೂಡ 1,760ಕ್ಕೆ ಏರಿಕೆಯಾಗಿದೆ.