ಕಾರ್ಕಳ: ತಾ.ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್
ಕಾರ್ಕಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಬಂಗ್ಲೆಗುಡ್ಡೆ ಮೊಹಮ್ಮದ್ ಶರೀಫ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಕಳದ ಪ್ರವಾಸಿ ಮಂದಿರದಲ್ಲಿ ಫೆ.2 ರಂದು ನಡೆದ ಸಂಘದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಈ ಸಭೆಯಲ್ಲಿ ಸಂಘದ ಅಧ್ಯಕ್ಷರಾಗಿ ಬಂಗ್ಲೆಗುಡ್ಡೆ ಮೊಹಮ್ಮದ್ ಶರೀಫ್ ಅವರನ್ನು ಆಯ್ಕೆ ಮಾಡಿದ್ದು, ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಎಂ. ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ರಾಮಚಂದ್ರ ಬರೆಪ್ಪಾಡಿ, ಹರೀಶ್ ಆಚಾರ್ಯ, ಕೋಶಾಧಿಕಾರಿ ಬಾಲಕೃಷ್ಣ ಭೀಮಗುಳಿ, ಉಪಾಧ್ಯಕ್ಷರಾಗಿ ಶರತ್ ಶೆಟ್ಟಿ ಸಂಕಲಕರಿಯ, ರಾಮ್ ಅಜೆಕಾರು, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸತೀಶ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಸಂಘದ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಅವರು ಪದಧಿಕಾರಿಗಳ ಆಯ್ಕೆ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.