ಭಾರತದಲ್ಲಿ ಕೊರೋನಾ ವೈರಸ್ ಗುಣಮುಖ ಪ್ರಮಾಣ ಶೇ.48.47ಕ್ಕೆ ಏರಿಕೆ
ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಗುಣಮುಖ ಪ್ರಮಾಣ ಶೇ.48.47ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶಾದ ವಿವಿಧ ರಾಜ್ಯಗಳಲ್ಲಿ ಒಟ್ಟಾರೆ 4,785 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದು, ಆ ಮೂಲಕ ಭಾರತದಲ್ಲಿ 1,29,214 ಗುಣಮುಖರಾಗಿದ್ದಾರೆ. ಇದರೊಂದಿಗೆ ಭಾರತದ ಕೊರೋನಾ ವೈರಸ್ ಸೋಂಕಿತರ ಗುಣಮುಖ ಪ್ರಮಾಣ ಶೇ.48.47ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ 2,66,598ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 7,466 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಅಂತೆಯೇ ದೇಶಾದ್ಯಂತ ಇಂದು 266 ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 9,987ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಈ ವರೆಗೂ 1,29,214 ಸೋಂಕಿತರು ಗುಣಮುಖರಾಗಿದ್ದು, 1,29,917 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.