ಯುವವಾಹಿನಿ ಉಡುಪಿ ಘಟಕಕ್ಕೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ
ಉಡುಪಿ : ತನ್ನ ಸಾಮಾಜಿಕ ಕಳಕಳಿಯ ಕಾರ್ಯಗಳ ಮೂಲಕ ಗಮನ ಸೆಳೆದಿರುವ ಯುವವಾಹಿನಿ ಮಂಗಳೂರು ಇದರ ಉಡುಪಿ ಘಟಕಕ್ಕೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ಲಭಿಸಿದೆ. ಇತ್ತೀಚೆಗಷ್ಟೇ ಉಡುಪಿ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್, ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮೊದಲಾದವರು ಉಪಸ್ಥಿತರಿದ್ದರು.