ಕೊರೋನಾ ಸೋಂಕಿಗೆ ಡಿಎಂಕೆ ಶಾಸಕ ಜೆ.ಅನ್ಬಳಗನ್ ಬಲಿ

ಚೆನ್ನೈ:ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಗಂಭೀರ ಸ್ವರೂಪದಲ್ಲಿದ್ದ ಡಿಎಂಕೆ ಶಾಸಕ ಜೆ ಅನ್ಬಳಗನ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

62 ವರ್ಷದ ಡಿಎಂಕೆ ಶಾಸಕ ಜೆ ಅನ್ಬಳಗನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಆಮ್ಲಜನಕದ ಪ್ರಮಾಣ ಅರ್ಧಕ್ಕೆ ಇಳಿದಿದೆ ಎಂದು ನಿನ್ನೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

ನಂತರವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿರಲಿಲ್ಲ. ಅವರಿಗೆ ಹೃದ್ರೋಗ, ರಕ್ತದೊತ್ತಡ, ಕಿಡ್ನಿ ಸಮಸ್ಯೆ ಕೂಡ ಇದ್ದಿತ್ತು. ಎಲ್ಲವೂ ಒಟ್ಟು ಸೇರಿ ಕೊರೋನಾ ಸೋಂಕು ತಗಲಿದ ನಂತರ ಗಂಭೀರವಾಗಿ ಮೃತಪಟ್ಟಿದ್ದಾರೆ.

ಉಸಿರಾಟದ ಸಮಸ್ಯೆ ಎಂದು ಹೇಳಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾದ ಅನ್ಬಳಗನ್ ಅವರಿಗೆ ಪರೀಕ್ಷೆ ಮಾಡಿಸಿದಾಗ ಕೊರೋನಾ ಸೋಂಕು ದೃಢಪಟ್ಟಿತ್ತು

Leave a Reply

Your email address will not be published. Required fields are marked *

error: Content is protected !!