ಬಸ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ-ಆರೋಪಿಗೆ ಕಪಾಳಮೋಕ್ಷ: ಮಾನವ ಹಕ್ಕು ಉಲ್ಲಂಘನೆ ದೂರು
ಮಂಗಳೂರು: ಬಸ್ನಲ್ಲಿ ಸಹ ಪ್ರಯಾಣಿಕನೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗೆ ಕಪಾಳಮೋಕ್ಷಕ್ಕೆ ಅನುಮತಿ ನೀಡಿದ್ದು ಮಾನವ ಹಕ್ಕು ಉಲ್ಲಂಘನೆ ಎಂದು ನ್ಯಾಯಾಲಯಕ್ಕೆ ದೂರು ಸಲ್ಲಿಕೆಯಾಗಿದೆ. ಸುರತ್ಕಲ್ ಚೊಕ್ಕಬೆಟ್ಟುವಿನ ಜೋಹಾನ್ ಸಿಕ್ವೆರಾ ಅವರು ದ.ಕ. ಜಿಲ್ಲಾ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದಾರೆ.
ಪ್ರಕರಣದ ಬಂಧಿತ ಆರೋಪಿಯನ್ನು ಮಾಧ್ಯಮದ ಎದುರು ಹಾಜರುಪಡಿಸಿದಾಗ ಆರೋಪಿಗೆ ಕಪಾಳಮೋಕ್ಷ ಮಾಡಲು ಅವಕಾಶ ನೀಡಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ. ಇದಕ್ಕೆ ಅವಕಾಶ ಕಲ್ಪಿಸಿಕೊಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
ಜ.14 ರಂದು ಯುವತಿಯೊಬ್ಬರು ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಸಹ ಪ್ರಯಾಣಿಕ ಕಾಸರಗೋಡಿನ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದಂತೆ ಈ ವಿಚಾರ ಭಾರೀ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಯುವತಿ ನೀಡಿದ ದೂರನ್ನು ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
Not only on police officers. Also on one n gbo lady who is present at that time and slapped on face of accused.