ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ; ಪತಿ ಸಾವು, ಪತ್ನಿ ಗಂಭೀರ

ಬೆಳಗಾವಿ: ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದು, ಘಟನೆಯಲ್ಲಿ ಪತಿ ಮೃತಪಟ್ಟರೆ, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿ ನಗರದ ಒಂದನೇ ರೈಲ್ವೆ ಗೇಟ್ ಬಳಿ ಗುರುವಾರ ಈ ಘಟನೆ ನಡೆದಿದೆ‌.

ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ರಾಗಿದ್ದು, ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!