ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿದ ವಕೀಲೆ!

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಎದುರಿಸುತ್ತಿರುವ ಸಾಹಿತಿ ಪ್ರೊ. ಭಗವಾನ್ ಅವರು, ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ವೇಳೆ ಅವರ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ವಕೀಲೆಯೊಬ್ಬರು ಮಸಿ ಬಳಿದ ಘಟನೆಯೊಂದು ನಡೆದಿದೆ. 

ಪ್ರೊ. ಭಗವಾನ್ ಅವರು ಹಿಂದೂ ಧರ್ಮವನ್ನು ಅವಹೇಳನ ಮಾಡುವಂತ ಹೇಳಿಕೆ ನೀಡಿದ್ದರ ಕುರಿತಾಗಿ ವಕೀಲರಾದ ಮೀರಾ ರಾಘವೇಂದ್ರ ಅವರು, ಎರಡನೇ ಎಸಿ ಎಂಎಂ  ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದೇ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಲೇಖಕ ಭಗವಾನ್ ಅವರಿಗೆ ಕೋರ್ಟ್ ಸೂಚನೆ ನೀಡಿತ್ತು. ವಿಚಾರಣೆಗಾಗಿಹಾಗೂ ಜಾಮೀನು ಪಡೆಯುವ ಸಲುವಾಗಿ ಮೈಸೂರಿನಿಂದ ಪ್ರೊ.ಭಗವಾನ್ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ವೇಳೆ ಭಗವಾನ್ ಅವರಿಗೆ ಎದುರಾಗಿದ್ದ ವಕೀಲೆ ಮೀರಾ ರಾಘವೇಂದ್ರ ಅವರು, ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದಾರೆ. ಅಲ್ಲದೆ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ನಿಮಗೆ ಇಷ್ಟು ವಯಸ್ಸಾಗಿದೆ, ಹಿಂದೂ ಧರ್ಮದ ಬಗ್ಗೆ ಇಲ್ಲಸಲ್ಲದ ಹೇಳಿಕೆ ಏಕೆ ನೀಡುತ್ತೀರಿ, ರಾಮನ ಬಗ್ಗೆ ಧರ್ಮದ ಬಗ್ಗೆ ಮಾತಾಡ್ತೀರಲ್ಲ ನಿಮಗೆ ನಾಚಿಕೆ ಆಗೋದಿಲ್ವಾ ಎಂದು ಮಸಿ ಮಳಿದಿರುವ ವಿಡಿಯೋವನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದರು.

‘ಬುದ್ಧಿಜೀವಿ, ಧರ್ಮ ವಿರೋಧಿ ಪ್ರೊ. ಭಗವಾನ್ ಅವರು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಬಳಿಕ ಅವರಿಗೆ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದ್ದೇನೆ. ಜೈ ಶ್ರೀರಾಮ್’ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!