ಶಿರಾಡಿ ಘಾಟಿ: 2ನೇ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ – ವಾಹನ ಸಂಚಾರ ಸ್ಥಗಿತ
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯ 2 ನೇ ತಿರುವಿನಲ್ಲಿ ಅನಿಲ ತುಂಬಿದ ಟ್ಯಾಂಕರ್ ಮಗುಚಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಅಡುಗೆ ಅನಿಲ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ರಸ್ತೆಗೆ ಮಗುಚಿ ಬಿದ್ದಿದೆ. ಮುಂಜಾಗೃತಾ ಕ್ರಮವಾಗಿ ಈ ಮಾರ್ಗದ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ರಾತ್ರಿ ವೇಳೆ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇನ್ನು ಫೆ.2 ರಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಇದೇ ರೀತಿ ಗ್ಯಾಸ್ ತುಂಬಿದ ಟ್ಯಾಂಕರ್ ಮಗುಚಿ ಬಿದ್ದು ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.