ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿ, ಜಾಲತಾಣಕ್ಕೆ ಮುಖ್ಯಮಂತ್ರಿ ಚಾಲನೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿ, ಲಾಂಛನ ಹಾಗೂ ಜಾಲತಾಣಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಕಂದಾಯ ಸಚಿವ ಆರ್.ಅಶೋಕ್, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎಸ್.ಆರ್.ವಿಶ್ವನಾಥ್, ಸಂಸದ ತೇಜಸ್ವಿ ಸೂರ್ಯ, ಮಾಜಿ ಸಚಿವರುಗಳಾದ ಆರ್.ವಿ.ದೇಶಪಾಂಡೆ ಹಾಗೂ ರಾಮ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.