ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ!
ಬೆಂಗಳೂರು: ಹಾವೇರಿಯಲ್ಲಿ ಇದೇ ತಿಂಗಳ ಅಂತ್ಯದಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗಿದೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಫೆಬ್ರವರಿ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳವನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಲಾಯಿತು.
“ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳಕ್ಕೆ ಆಗಬೇಕಿರುವ ಸಿದ್ಧತೆಗಳು ಇನ್ನೂ ಅಪೂರ್ಣವಾಗಿದೆ ಜೊತೆಗೆ ದೊಡ್ಡ ಸಂಖ್ಯೆಯಲ್ಲಿ ಸಾಹಿತ್ಯ ಆಸಕ್ತರು ಸೇರುವುದರಿಂದ ಕೋವಿಡ್ ನಿಯಮಗಳ ಪಾಲನೆಯೂ ಕಷ್ಟಕರವಾಗುತ್ತದೆ ಎಂಬ ಕಾರಣಕ್ಕೆ ಸಮ್ಮೇಳನವನ್ನು ಮುಂದೂಡಿಕೆ ಮಾಡಲಾಗಿದೆ.
“ಫೆಬ್ರವರಿ ಅಂತ್ಯಕ್ಕೆ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇದ್ದು ಈ ನಂತರ ಮಾರ್ಚ್ 09 ಕ್ಕೆ ಮತ್ತೊಂದು ಸಭೆ ನಡೆಸಿ ಸಮ್ಮೇಳನ ನಡೆಸುವ ದಿನಾಂಕ ನಿರ್ಧರಿಸಲಾಗುವುದು” ಎಂದು ಸಚಿವರಾದ ಅರವಿಂದ ಲಿಂಬಾವಳಿ ಹೇಳಿದ್ದಾರೆ.