ಕಾರು ಅಪಘಾತ – ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಗೆ ಗಾಯ

ಮಂಗಳೂರು: ಮಂಗಳೂರಿನ ನಂತೂರು ಜಂಕ್ಷನ್ ಬಳಿ ಇಂದು ಮುಂಜಾನೆ ಮೀನಿನ ಲಾರಿ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡಿದ್ದಾರೆ.

ದಯಾನಂದ ಕತ್ತಲ್ ಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದರು ಈ ವೇಳೆ ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಿಂದ ದಯಾನಂದ ಕತ್ತಲ್ ಸಾರ್ ಅವರಿಗೆ ತಲೆಗೆ ಗಾಯಗಳಾಗಿದ್ದು, ಅವರನ್ನು  ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ದಯಾನಂದ ಸಾರ್ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!