ರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯದಿಂದ 1 ಕೋಟಿ ದೇಣಿಗೆ
ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರು. ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ .ಸಿ.ಎನ್.ಅಶ್ವತ್ಥನಾರಾಯಣ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಪಸಂಖ್ಯಾತ ಸಮುದಾಯಗಳಿಗೆ ವಿರುದ್ಧ ಎನ್ನುವುದು ತಪ್ಪು . ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಬಿಜೆಪಿಯ ಮಂತ್ರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದರು.
ಕ್ರೈಸ್ತ ಸಮುದಾಯದ ಪರವಾಗಿ ಎನ್ಆರ್ಐ ಉದ್ಯಮಿ ರೊನಾಲ್ಡ್ ಕೊಲಾಸೋ ಮಾತನಾಡಿ , “ನಮ್ಮ ಸಮುದಾಯವು ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ, ದೇಶದ ವಿಷಯಗಳಲ್ಲಿ ನಾವು ಯಾವಾಗಲೂ ಬೆಂಬಲ ನೀಡುತ್ತೇವೆ” ಎಂದು ಹೇಳಿದರು.