ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1ಲಕ್ಷ ರೂ. ಬಹುಮಾನ: ಪ್ರತಿಭಾ ಕುಳಾಯಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಬಹುಮಾನ ನೀಡುತ್ತೇನೆಂದು ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.
ಬಿಲ್ಲವರ ಆರಾದ್ಯ ದೈವ ಕೋಟಿ ಚೆನ್ನಯರ ಹಾಗೂ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಜನಾರ್ಧನ ಪೂಜಾರಿ ವಿರುದ್ಧ ಜಗದೀಶ್ ಅಧಿಕಾರಿ ಕೀಳಾಗಿ ಮಾತನಾಡಿರುವುದು ಬಿಲ್ಲವ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ.
ಜಗದೀಶ್ ಅವರು ಗರೋಡಿಗೆ ತೆರಳಿ ಜನಾರ್ಧನ ಪೂಜಾರಿಯವರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕೆಂದು ಪ್ರತಿಭಾ ಒತ್ತಾಯಿಸಿದ್ದಾರೆ. ಅಲ್ಲದೆ ಜಗದೀಶ್ ಅವರ ಮುಖಕ್ಕೆ ಮಸಿ ಬಳಿದ ಬಿಲ್ಲವ ಸಮುದಾಯದ ವ್ಯಕ್ತಿಗೆ ಒಂದು ಲಕ್ಷ ಬಹುಮಾನ ನೀಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಾಕಿರುವ ವಿಡಿಯೋ ವೈರಲ್ ಆಗಿದೆ.