ಮೂಡುಬಿದಿರೆ: ಜಗದೀಶ್ ಅಧಿಕಾರಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲು
ಮೂಡುಬಿದಿರೆ: ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಸೋಮವಾರ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.
ಅವತಾರ ಪುರುಷರಾದ ಕೋಟಿ ಚೆನ್ನಯ್ಯ, ಬಿಲ್ಲವ ಮುಖಂಡ ಹಾಗೂ ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿ ಬಗ್ಗೆ ಸಾರ್ವಜನಿಕ ಸಮಾರಂಭದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಜಗದೀಶ್ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ರಾಜು ಪಿ.ಕೆ ಸಹಿತ ಬಿಲ್ಲವ ಮುಖಂಡರು ಶುಕ್ರವಾರ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಜಗದೀಶ್ ಅಧಿಕಾರಿ ವಿರುದ್ಧ ದಂಡ ಸಂಹಿತೆ ಕಲಂ 295(ఎ), 505 ಅಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.