ಬಂಟ್ವಾಳ: ಒಂಬತ್ತನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ

ಬಂಟ್ವಾಳ : ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ  ವಿದ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ಬಂಟ್ವಾಳದ  ಬಾಳ್ತಿಲ ಗ್ರಾಮದ ಚೆರ್ಕಳದಲ್ಲಿ ನಡೆದಿದೆ.

ಶಂಭೂರು ಸರಕಾರಿ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿ ಹರ್ಷಿತ್ (14) ಆತ್ಮಹತ್ಯೆ ಮಾಡಿಕೊಂಡವರು. ಜಾತ್ರೆಯಿಂದ ಮನೆಗೆ ತಡವಾಗಿ ಬಂದಿರುವುದಲ್ಲದೆ ತಂಗಿಗೆ ಐಸ್ ಕ್ರೀಂ ತಂದಿರಲಿಲ್ಲ. ಈ ಕಾರಣಕ್ಕೆ ಮನೆಯಲ್ಲಿ ಬೈದಿದ್ದು, ಇದೇ ಕಾರಣದಿಂದ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಈತ ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!