ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್’ನ ನೂತನ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು.

ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ಕಣಕ್ಕಿಳಿದಿದ್ದರು. ಆದರೆ, ಕೊನೆಯ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹ್ಮದ್ ಕಣದಿಂದ ಹಿಂದೆ ಸರಿದ ಕಾರಣ ವಿಧಾನ ಪರಿಷತ್ ಸಭಾಪತಿಯಾಗಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!