ಪಡುಬಿದ್ರೆ ಕನ್ನಡ ಸಾಹಿತ್ಯ ಸಮ್ಮೇಳನ: ಶೀಲಾ.ಕೆ.ಶೆಟ್ಟಿ ಯವರಿಗೆ ಸನ್ಮಾನ
ಕಾಪು: ಕಲೆ, ಸಂಸ್ಕೃತಿ, ಸಾಹಿತ್ಯ, ನಾಟಕ, ಯಕ್ಷಗಾನ, ಮಹಿಳಾ ಸಬಲೀಕರಣ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಗುರುತಿಸಿಕೊಂಡು, ನಾಡು-ನುಡಿಗಾಗಿ ಗಣನೀಯ ಸೇವೆಯನ್ನು ಸಲ್ಲಿಸಿದ ಜಿಲ್ಲೆಯ ಹಿರಿಯ ಸಾಧಕಿ, ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ .ಕೆ.ಶೆಟ್ಟಿ ಇವರನ್ನು, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾಪು ತಾಲೂಕು ಘಟಕದ ವತಿಯಿಂದ ಪಡುಬಿದ್ರೆಯಲ್ಲಿ ನಡೆದ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೌರವಿಸಲಾಯಿತು.