ಮಾದಕ ವಸ್ತುಗಳನ್ನು ಮರಾಟ ಮಾಡಲು ಯತ್ನ- ನೈಜೀರಿಯಾ ಪ್ರಜೆ ಬಂಧನ
ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಮರಾಟ ಮಾಡಲು ಯತ್ನಿಸುತ್ತಿದ್ದ ನೈಜೀರಿಯಾ ಮೂಲದ ಡ್ರಗ್ಸ್ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೊರವಲಯದ ಮಾರಗೊಂಡನಹಳ್ಳಿ ವಾಸವಾಗಿದ್ದ ಇಫೆನಿ ಒಹೆಚುಲ್ವು ಮೈಕ್(41) ಬಂಧಿತ ನೈಜೀರಿಯಾ ಪ್ರಜೆ.
ಬಂಧಿತ ಆರೋಪಿಯಿಂದ 10 ಲಕ್ಷ ಮೌಲ್ಯದ ಮಾದಕ ವಸ್ತು ಎಕ್ಸಾಟಿಸಿ ಮಾತ್ರೆಗಳು ಮತ್ತು ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ತಕ್ಷಣ ಸ್ಥಳಕ್ಕೆ ತೆರಳಿ ಡ್ರಗ್ಸ್ ಪೆಡ್ಲರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.