10 ಮತ್ತು 12ನೇ ತರಗತಿಯ ಬಾಕಿ ಇರುವ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ನವದೆಹಲಿ: ಸಿಬಿಎಸ್‌ಇಯು 10 ಮತ್ತು 12ನೇ ತರಗತಿಯ ಬಾಕಿ ಇರುವ ಪರೀಕ್ಷೆಗಳ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. ಜುಲೈ 1ರಿಂದ 15ರ ವರೆಗೆ ಪರೀಕ್ಷೆಗಳು ನಡೆಯಲಿವೆ.

ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮಾರ್ಚ್‌ 25ರಿಂದ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ್ದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿತ್ತು.

10ನೇ ತರಗತಿಯ ಪರೀಕ್ಷೆ ಈಶಾನ್ಯ ದೆಹಲಿಯಲ್ಲಿ ಮಾತ್ರ ಬಾಕಿ ಇದೆ.

‘10ನೇ ತರಗತಿ ಪರೀಕ್ಷೆಗೆ ಜುಲೈ 1ರಿಂದ ಮೊದಲುಗೊಂಡು ನಾಲ್ಕು ದಿನಾಂಕ ನಿಗದಿಪಡಿಸಲಾಗಿದೆ. ಮೊದಲ ಪರೀಕ್ಷೆ ಸಮಾಜ ವಿಜ್ಞಾನ ವಿಷಯದ್ದಾಗಿರಲಿದೆ. ಮರುದಿನ ವಿಜ್ಞಾನ ಪರೀಕ್ಷೆ ನಡೆಯಲಿದೆ’ ಎಂದು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ತಿಳಿಸಿದ್ದಾರೆ.

‘ಜುಲೈ 10ರಂದು ಹಿಂದಿ ಭಾಷೆಯ ಉಭಯ ಕೋರ್ಸ್‌ಗಳಿಗೆ ಮತ್ತು 15ರಂದು ಇಂಗ್ಲಿಷ್ ಭಾಷೆಯ ಉಭಯ ಕೋರ್ಸ್‌ಗಳಿಗೆ ಪರೀಕ್ಷೆ ನಡೆಯಲಿದೆ’ ಎಂದು ಅವರು ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಬರುವಾಗ ವಿದ್ಯಾರ್ಥಿಗಳು ಮಾಸ್ಕ್‌ ಧರಿಸಿಕೊಂಡೇ ಬರಬೇಕು. ಸ್ಯಾನಿಟೈಸರ್‌ಗಳನ್ನು ಅವರೇ ತರಬೇಕು ಎಂದೂ ಅವರು ಹೇಳಿದ್ದಾರೆ.

‘ಮಕ್ಕಳು ಅನಾರೋಗ್ಯಪೀಡಿತರಲ್ಲ ಎಂಬುದನ್ನು ಪಾಲಕರು ದೃಢಪಡಿಸಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು’ ಎಂದೂ ಅವರು ಹೇಳಿದ್ದಾರೆ.

12ನೇ ತರಗತಿಯವರಿಗೆ ಜುಲೈ 1ರಂದು ಹೋಮ್ ಸೈನ್ಸಸ್ ಹಾಗೂ ಮರುದಿನ ಹಿಂದಿ ಭಾಷೆಯ ಉಭಯ ಕೋರ್ಸ್‌ಗಳಿಗೆ ಪರೀಕ್ಷೆ ನಡೆಯಲಿದೆ.

12ನೇ ತರಗತಿಯವರಿಗೆ ಜುಲೈ 9ರಂದು ಬ್ಯುಸಿನೆಸ್ ಸ್ಟಡೀಸ್, ಜುಲೈ 10ರಂದು ಬಯೋಟೆಕ್ನಾಲಜಿ ಮತ್ತು ಜುಲೈ 11ರಂದು ಜಿಯೋಗ್ರಫಿ ವಿಷಯಗಳ ಪರೀಕ್ಷೆ ನಡೆಯಲಿವೆ. 

ಕರ್ನಾಟಕ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊನೆಗೂ ಡೇಟ್ ಫಿಕ್ಸ್ ಆಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಜೂ. 25 ರಿನಂದ ಜು. 4 ವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, 2879 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
 ಜೂನ್ 18 ರಂದು ಬಾಕಿ ಉಳಿದ *ದ್ವಿತೀಯ ಪಿಯುಸಿ* ಇಂಗ್ಲಿಷ್ ಪರೀಕ್ಷೆ ನಡೆಯಲಿದೆ
.


1 thought on “10 ಮತ್ತು 12ನೇ ತರಗತಿಯ ಬಾಕಿ ಇರುವ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

Leave a Reply

Your email address will not be published. Required fields are marked *

error: Content is protected !!