ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್: ನೂತನ ಸಭಾಭವನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಶ್ರೀಕೃಷ್ಣಮಠದ ಕನಕ ಮಂಟಪದಲ್ಲಿ, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಇವರಿಂದ ಗುಂಡಿಬೈಲಿನಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಪರಿಷತ್ತಿನ ಸ್ವಂತ ಕಟ್ಟಡ  “ಬ್ರಾಹ್ಮೀ ಸಭಾಭವನ”ದ ಸಮರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ  ಯುವ ಬ್ರಾಹ್ಮಣ ಪರಿಷತ್ತಿನ ಅಧ್ಯಕ್ಷರಾದ ವಿಷ್ಣುಪ್ರಸಾದ್ ಪಾಡಿಗಾರು,ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಉಪಾಧ್ಯ, ಕಟ್ಟಡ ಸಮಿತಿಯ ಅಧ್ಯಕ್ಷರಾದ ರಂಜನ್ ಕಲ್ಕೂರ್,ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ವಿಷ್ಣು, ಕಾರ್ಯದರ್ಶಿ ಚಂದ್ರಕಾಂತ್ ಕೆ.ಎನ್ ಹಾಗೂ ಪದಾಧಿಕಾರಿಗಳು ಮತ್ತು ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *

error: Content is protected !!