ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ ಸಿ ಮಹದೇವಪ್ಪ ಭೇಟಿ: ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದೀಗ ಈ ಧಿಡೀರ್ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಂತ ಹೆಚ್.ಸಿ.ಮಹದೇವಪ್ಪ ಅವರು, ಸಿದ್ದರಾಮಯ್ಯ ಜೊತೆಗಿನ ಆತ್ಮೀಯತೆಯಿಂದ ದೂರಾಗಿದ್ದರು. ಆದರೀಗ ಹೆಚ್.ಸಿ. ಮಹದೇವಪ್ಪ ಅವರ ನಿವಾಸಕ್ಕೆ ತೆರಳಿದಂತ ಸಿದ್ದರಾಮಯ್ಯ ಅವರು, ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಎಚ್. ಸಿ ಮಹಾದೇವಪ್ಪ ಅವರು, ನನ್ನ ಸಿದ್ದರಾಮಯ್ಯ ನಡುವಿನ ಭಾಂಧವ್ಯ ಹಿಂದೆ ಹೇಗಿತ್ತೋ ಹಾಗೇ ಇದೆ. ಸಂವಿಧಾನದ ಆಶಯಕ್ಕೆ ಧಕ್ಕೆಯಾದಾಗ ಸದಾ ಹೋರಾಟ ಮಾಡ್ತಾ ಬಂದಿದ್ದೇವೆ. ನಾವು ಬರೀ ಅಧಿಕಾರ ಮಾಡ್ತಾ ಇದ್ದವರಲ್ಲ. ನನಗೆ ಆರೋಗ್ಯ ಸಮಸ್ಯೆ ಆಗಿದ್ದರಿಂದ ಕೆಲವು ಕಾಲ ಮನೆಯಿಂದ ಹೊರಗೆ ಬಂದಿಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!