ಬೈಂದೂರು: ಡಿವೈಡರ್‌ಗೆ ಬೈಕ್ ಡಿಕ್ಕಿ, ಬಾಲಕ ಮೃತ್ಯು

ಬೈಂದೂರು: ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರಿನ ಅಳ್ವೆಗದ್ದೆ ಕ್ರಾಸ್ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಹಡವಿನಕೋಣೆ ನಿವಾಸಿ ಅರಾನ್(15) ಮೃತ ಬೈಕ್ ಸವಾರ.

ಇತನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ಕಳೆದ ವಾರವಷ್ಟೆ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸಿದ ಕಾರಣ ಪೊಲೀಸರು ಇತನಿಗೆ ದಂಡ ವಿಧಿಸಿದ್ದರು.

ಇಂದು ಅಳ್ವೆಗದ್ದೆ ಕ್ರಾಸ್ ಬಳಿ ಅತೀ ವೇಗದಿಂದ ಬೈಕ್ ಚಲಾಯಿಸಿಕೊಂಡು ಬಂದು  ಡಿವೈಡರ್‌ಗೆ ಡಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತನಿಗೆ ಬೈಕ್ ಚಾಲನೆಗೆ ನೀಡಿದ ಪೋಷಕರ ಮೇಲೆ ಕೇಸು ದಾಖಲಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!