ಫೆ.14-16 ಚಿತ್ರಪಾಡಿ ಶ್ರೀ ಅಘೋರೇಶ್ವರ ದೇಗುಲದ ಅಷ್ಟಬಂಧ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

ಕೋಟ: ಕಾರ್ತಟ್ಟು ಚಿತ್ರಪಾಡಿ ಶ್ರೀ ಅಘೋರೇಶ್ವರ ದೇಗುಲದ ಅಷ್ಟಬಂಧ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಫೆ. 14 ರಿಂದ 16ರ ವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕಿದಿಯೂರು ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಈ ಕುರಿತಾಗಿ ಮಾತನಾಡಿದ ಅವರು, ಮೂರು ದಿನಗಳ ವರೆಗೆ ನಡೆಯಲಿರುವ ಅಷ್ಟಬಂಧ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ. 11ರಂದು ಉಗ್ರಾಣ ಮುಹೂರ್ತ ನಡೆಯಲಿದ್ದು, ಈ ಉಗ್ರಾಣ ಮುಹೂರ್ತ ವನ್ನು ಕರ್ಣಾಟಕ ಬ್ಯಾಂಕ್‍ನ ಎಜಿಎಂ ಗೋಪಾಲಕೃಷ್ಣ ಸಾಮಗ ನೆರವೇರಿಸಲಿದ್ದಾರೆ. ಫೆ. 14ರ ಮುಂಜಾನೆಯಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಸಂಜೆ 4ಕ್ಕೆ ಸಾಲಿಗ್ರಾಮ ಗುರುನರಸಿಂಹ ದೇಗುಲದಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.
 ಇನ್ನು  ಫೆ. 15 ರಂದು ದೇವರ ಪುನಃಪ್ರತಿಷ್ಠೆ ಫೆ. 16ರಂದು ಬ್ರಹ್ಮಕಲಶೋತ್ಸವ, ಮಹಾ ಅನ್ನಸಂತರ್ಪಣೆ, ಧಾರ್ಮಿಕ ಸಭೆ ನಡೆಯಲಿದೆ. ಪ್ರತಿದಿನ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಅಂಗಾರ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಡಾ. ಜಿ. ಶಂಕರ್ ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

  ಈ ಸಂದರ್ಭ ಪ್ರಧಾನ ಅರ್ಚಕ ಬಾಲಕೃಷ್ಣ ನಕ್ಷತ್ರಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಕಾರಂತ, ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮಂಜುನಾಥ ನಾಯಾರಿ, ಕಾರ್ಯದರ್ಶಿ ಶ್ಯಾಮಸುಂದರ ನಾಯಾರಿ, ಉಮೇಶ್ ನಾಯಾರಿ, ಕೋಶಾಧಿಕಾರಿ ಪ್ರಕಾಶ್ ಮದ್ಯಸ್ಥ,  ಪ್ರಚಾರ ಸಮಿತಿಯ ರಾಧಾಕೃಷ್ಣ ಬ್ರಹ್ಮಾವರ, ಕಲಾರಂಗದ ಅಧ್ಯಕ್ಷ ಲಕ್ಷ್ಮಣ ನಾಯಾರಿ, ಮಾಜಿ ಅಧ್ಯಕ್ಷ ಪ್ರಭಾಕರ ನಾಯಾರಿ, ನಿವೃತ್ತ ಶಿಕ್ಷಕ ರಾಮಚಂದ್ರ ನಾಯಾರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!