ಮಂಗಳೂರು: ರ್‍ಯಾಗಿಂಗ್ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು: ದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ವಿಭಾಗದಲ್ಲಿ ರ್ಯಾಗಿಂಗ್ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಪಿಟಿ ವಿಭಾಗದ ಪ್ರಥಮ ವರ್ಷದ 5 ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ 18 ಮಂದಿ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿತ್ತು.

ಫೆ.4 ರಂದು ಘಟನೆ ನಡೆಸಿದ್ದು, ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಫೆ.8ರಂದು ಠಾಣೆಯಲ್ಲಿ ದೂರು ದಾಖಲು ಮಾಡಿದೆ ಎಂದು ತಿಳಿದುಬಂದಿದೆ.

ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತಮ್ಮ ತರಗತಿ ಕೋಣೆಗೆ ಕಿರಿಯ ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ಕರೆಸಿಕೊಂಡಿದ್ದು, ಈ ವೇಳೆ ತಮ್ಮೆದುರು ತಲೆ ತಗ್ಗಿಸಿ ನಿಲ್ಲಬೇಕೆಂದು ಬೆದರಿಕೆ ಹಾಕಿದ್ದಾರೆ. ಅಲ್ಲದೆ, ತಮ್ಮನ್ನು ಟಾರ್ಗೆಟ್ ಮಾಡಿಕೊಂಡು ತಳ್ಳಾಟ ನಡೆಸಿದ್ದರು ಎಂದು ಕಿರಿಯ ವಿದ್ಯಾರ್ಥಿಗಳು ದೂರಿದ್ದಾರೆ.

Leave a Reply

Your email address will not be published. Required fields are marked *

error: Content is protected !!