ಹೆಬ್ರಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ ಶೆಟ್ಟಿ ಆಯ್ಕೆ
February 12, 2021
ಹೆಬ್ರಿ: ಬ್ಲಾಕ್ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹುತ್ತುರ್ಕೆಯ ದಿನೇಶ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎರಡನೇ ಅವಧಿಗೆ ಚಾರ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿರುವ ದಿನೇಶ ಶೆಟ್ಟಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಸಮಾಜ ಸೇವಕರಾಗಿರುವ ವಿವಿಧ ಸಂಘಸಂಸ್ಥೆಯಲ್ಲಿ ಸಕ್ರೀಯರಾಗಿದ್ದಾರೆ.