ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆ – ಮದ್ಯ ಮಾರಾಟ ನಿಷೇಧ

ಉಡುಪಿ: ಮಂದಾರ್ತಿ ಗ್ರಾಮದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆಬ್ರವರಿ 12 ರಿಂದ 14 ರ ವರೆಗೆ ನಡೆಯಲಿರುವುದರಿಂದ, ಈ ಸಮಯದಲ್ಲಿ ಬಾರ್ ಮತ್ತು ವೈನ್ ಶಾಪ್‌ಗಳು ತೆರೆದಿದ್ದಲ್ಲಿ, ಮದ್ಯಪಾನಾಸಕ್ತರು ಮದ್ಯಪಾನ ಮಾಡಿ, ಗಲಭೆ ಮಾಡುವ ಸಾಧ್ಯತೆ ಇರುವುದರಿಂದ ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಗ್ಗುಂಜೆ ಮತ್ತು ಶಿರೂರು ಗ್ರಾಮದ ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯ ಮಾರಾಟವನ್ನು ಫೆ. 12 ರ ಸಂಜೆ 6 ರಿಂದ ಫೆ. 14 ರ ರಾತ್ರಿ 12 ರ ವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!