ಉಡುಪಿ: ರಾ.ಹೆದ್ದಾರಿಯಲ್ಲಿ ಜಾಥಾ ಮೂಲಕ ಸ್ವಚ್ಛತೆ ಕುರಿತು ಜನಜಾಗೃತಿ
ಉಡುಪಿ: ನಗರಸಭೆ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸ್ಚಚ್ಚತಾ ಅಭಿಯಾನವನ್ನು ಇಂದು ನಗರದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸ್ವಚ್ಛತಾ ಅಭಿಯಾನವನ್ನು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸ್ವಚ್ಚ ಸುಂದರ ಉಡುಪಿಯನ್ನಾಗಿಸಿಲು ಜನತೆಗೆ ಕರೆ ನೀಡಿದರು. ಸ್ವಚ್ಛತಾ ಅಭಿಯಾನದ ಅಂಗವಾಗಿ ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಜಂಕ್ಷನ್ನಿಂದ ಬಲೈಪಾದೆವರೆಗೆ ಹಾಗೂ ಕರಾವಳಿ ಜಂಕ್ಷನ್ನಿಂದ ಸಂತೆಕಟ್ಟೆಯವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಥಾ ಮೂಲಕ ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸಲಾಯಿತು.
ಈ ಸಂದರ್ಭ ನಗರಸಭೆಯ ಅಧ್ಯಕ್ಷೆ ಸುಮಿತ್ರ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಸಾಲಿಯಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಎಂ ಅಂಚನ್, ನಗರಸಭೆಯ ಸದಸ್ಯರು, ಪೌರಾಯುಕ್ತ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ ರಾಜು, ಪರಿಸರ ಅಭಿಯಂತರ ಸ್ನೇಹ ಕೆ.ಎಸ್ ಹಾಗೂ ಎಲ್ಲಾ ನಗರಸಭೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.