ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ – ಉಪಾಧ್ಯಕ್ಷ ಅರುಣ್ ಜತ್ತನ್ ಆಯ್ಕೆ
ಉಡುಪಿ: ತೆಂಕನಿಡಿಯೂರು ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಗಾಯತ್ರಿ ಹಾಗೂ ಉಪಾಧ್ಯಕ್ಷರಾಗಿ ಅರುಣ್ ಜತ್ತನ್ ಆಯ್ಕೆಯಾಗಿದ್ದಾರೆ.
ಇಂದು ತೆಂಕನಿಡಿಯೂರು ಪಂಚಾಯತ್ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 14/12 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ತೆಂಕನಿಡಿಯೂರು ಪಂಚಾಯಿತ್ ಉಸ್ತುವಾರಿ ಕೆ. ರಾಘವೇಂದ್ರ ಕಿಣಿ ಅವರು ಮಾತನಾಡಿ, ಸಾಮಾನ್ಯ ಕ್ಷೇತ್ರದ ಮಹಿಳೆಯನ್ನು ಅದರಲ್ಲೂ ಸಮಾಜದಲ್ಲಿ ಅತ್ಯಂತ ಹಿಂದುಳಿದ ವರ್ಗದ ಮಹಿಳೆಯನ್ನು ಬಿಜೆಪಿ ಅಧ್ಯಕ್ಷೆಯಾಗಿ ಆಯ್ಕೆ ಮಾಡಿದೆ.
ಉಡುಪಿ ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಭೂತಪೂರ್ವ ಕ್ಷಣವಾಗಿದೆ ಎಂದರು. ಈ ಸಂದರ್ಭ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ತೆಂಕನಿಡಿಯೂರು ಪಂಚಾಯಿತಿಯ ಸಹ ಉಸ್ತುವಾರಿ ಸುಂದರ್ ಕಲ್ಮಾಡಿ, ತಾಲೂಕ್ ಪಂಚಾಯತ್ ಉಪಾಧ್ಯಕ್ಷರಾದ ಶರತ್ ಬೈಲಕೆರೆ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಸಾಲ್ಯಾನ್, ಕೃಷ್ಣ ಶೆಟ್ಟಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರು ಮತ್ತು ಇನ್ನಿತರ ನಾಯಕರು ಉಪಸ್ಥಿತರಿದ್ದರು.