ಅಂಬಲಪಾಡಿ ಗ್ರಾ.ಪಂ: ಅಧ್ಯಕ್ಷೆ ರೋಹಿಣಿ ಉಪಾಧ್ಯಕ್ಷರಾಗಿ ಸೋಮನಾಥ್ ಬಿ.ಕೆ ಆಯ್ಕೆ
ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ರೋಹಿಣಿ ಎಸ್.ಕಪ್ಪೆಟ್ಟು ಮತ್ತು ಉಪಾಧ್ಯಕ್ಷರಾಗಿ ಸೋಮನಾಥ್ ಬಿ.ಕೆ. ಅಂಬಲಪಾಡಿ ಆಯ್ಕೆಯಾಗಿದ್ದಾರೆ. ಅಂಬಲಪಾಡಿ ಗ್ರಾಮ ಪಂಚಾಯತ್‍ನ 19 ಸದಸ್ಯರಲ್ಲಿ 17 ಮಂದಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿದ್ದು, ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಚುನಾವಣಾಧಿಕಾರಿಯಾಗಿ ಅಧ್ಯಕ್ಷ , ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ವೇಳೆ ಅಂಬಲಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಆನಂದ್ ಜುನ್ನೂರ್ ಸಹಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಅಂಬಲಪಾಡಿ ಗ್ರಾಮ ಪಂಚಾಯತ್ ಚುನಾವಣಾ ಉಸ್ತುವಾರಿ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ನಗರ ಕಾರ್ಯದರ್ಶಿ ದಯಾಶಿನಿ ಪಂದುಬೆಟ್ಟು, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ನಗರ ಪಂಚಾಯತ್ ರಾಜ್ ಪ್ರಕೋಷ್ಠದ ಸಹ ಸಂಚಾಲಕ ಗಿರೀಶ್ ಅಮೀನ್ ಕಿದಿಯೂರು, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ದಿನಕರ ಪೂಜಾರಿ ಉಪಸ್ಥಿತರಿದ್ದರು. |