ಮುಂಬೈ: ಹಲವು ವಾಹನಗಳ ನಡುವೆ ಭೀಕರ ಸರಣಿ ಅಪಘಾತ-ಐವರ ಮೃತ್ಯು

ಮುಂಬೈ: ಹಲವು ವಾಹನಗಳ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಐವರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಫೆ.15ರ ತಡರಾತ್ರಿ ಮಹಾರಾಷ್ಟ್ರ ಮುಂಬೈ- ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಅಪಘಾತದಲ್ಲಿ ನವೀ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ ಜೊತೆ ಸೇವೆ ಸಲ್ಲಿಸುತ್ತಿದ್ದ ವೈದ್ಯ ವೈಭವ್ ಜಂಜಾರೆ ಮತ್ತು ಕುಟುಂಬಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಾಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಕ್ಸ್ ಪ್ರೆಸ್ ವೇ ನ ಖಲಾಪುರ್ ಟೋಲ್ ಪ್ಲಾಜಾ ಬಳಿ ಟ್ರಕ್ಕೊಂದು ಎರಡು ಕಾರುಗಳಿಗೆ ಮತ್ತು ಒಂದು ಗೂಡ್ಸ್ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ವಾಹನಗಳು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!