ಫೆ. 22ರಿಂದ 6 ರಿಂದ 8ನೇ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಬೆಂಗಳೂರು: 6 ರಿಂದ 8ನೇ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಫೆಬ್ರವರಿ 22ರಿಂದ ಶಾಲಾ ತರಗತಿಗಳು ಆರಂಭಗೊಳ್ಳಲಿದೆ.  
ಈ ಬಗ್ಗೆ  ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ರಾಜ್ಯದಲ್ಲಿ 9 ರಿಂದ 12ನೇ ತರಗತಿ ಆರಂಭದ ಬಳಿಕ, ಈಗ 6 ರಿಂದ 8ನೇ ತರಗತಿ ಆರಂಭಿಸಲಾಗುತ್ತಿದೆ.

1 ರಿಂದ 5ನೇ ತರಗತಿಯವರೆಗೆ ವಿದ್ಯಾಗಮದ ಮೂಲಕ ಶೈಕ್ಷಣಿಕ ಕಲಿಕೆ ಮುಂದುವರೆಯಲಿದೆ ಎಂದರು. ಸಿಬಿಎಸ್ ಸಿಇ ಶೈಕ್ಷಣಿಕ ತರಗತಿಗಳು ಏಪ್ರಿಲ್ 1ರಿಂದ ಆರಂಭಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ. ಕೊರೋನಾ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯವಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!