ಸಿದ್ದರಾಮಯ್ಯರಿಂದ ರಾಹುಲ್ ಗಾಂಧಿ ಭೇಟಿ: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಆಗುವ ಸಲುವಾಗಿ ಇಂದು ಬೆಳಿಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿಯ ವಿವಾಹ ಆರತಕ್ಷತೆಯಲ್ಲಿ ಭಾಗಿಯಾಗಲು ರಾಹುಲ್ ಗಾಂಧಿ ಬುಧವಾರ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ.

ಆದರೆ ಅದಕ್ಕೂ ಮುನ್ನವೇ, ಮುನ್ನವೇ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿಯವರ ಭೇಟಿ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ಆರಂಭವಾಗಿದೆ.

ರಾಜ್ಯದಲ್ಲಿ ಮೀಸಲಾತಿಗಾಗಿ ಮೂರು ಪ್ರಬಲ ಸಮುದಾಯಗಳು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದರ ಜತೆಗೆ, ರಾಜ್ಯ ರಾಜಕೀಯ ಬೆಳವಣಿಗೆಗಳು, ಕಾಂಗ್ರೆಸ್ ಪಕ್ಷದ ಚಟುವಟಿಕೆಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷವಾಗಿ ತೆಗೆದುಕೊಳ್ಳಬಹುದಾದ ನಿರ್ಣಯಗಳ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!