ಜಲಪಾತದಲ್ಲಿ ಗುಡ್ಡ ಕುಸಿತ, 23 ದಿನಗಳ ಕಾರ್ಯಾಚರಣೆ ಬಳಿಕ ಮೃತ ದೇಹ ಪತ್ತೆ!

ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ್ದ ಯುವಕ ಮೃತದೇಹ ಇಂದು ಪತ್ತೆಯಾಗಿದೆ. ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ(20) ಮೃತ ವಿದ್ಯಾರ್ಥಿ. ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ್ದ ಯುವಕನ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಿರಲಿಲ್ಲ. ಮಣ್ಣು ಕಲ್ಲುಬಂಡೆಯಡಿ ಸುಲುಕಿದ್ದರಿಂದ ವಿದ್ಯಾರ್ಥಿಯ ಮೃತ ದೇಹ ಸತತ 23 ದಿನಗಳ ಕಾರ್ಯಾಚರಣೆ ಬಳಿಕ ಇಂದು ಪತ್ತೆಯಾಗಿದೆ.

ಘಟನೆ ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಗಾಗಿ ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿಗಳ ಮೂಲಕ 22 ದಿನ ಸುಮಾರು 30 ಅಡಿಗಳಷ್ಟು ಆಳದ ಮಣ್ಣು ತೆರವು ಕಾರ್ಯ ಸತತವಾಗಿ ನಡೆದಿತ್ತು. ವಿದ್ಯುತ್ ಸಂಪರ್ಕವಾಗಲಿ, ಯಂತ್ರೋಪಕರಣ ಬಳಸಲು ಸಾಧ್ಯವಿಲ್ಲದಿದ್ದರೂ ಶೋಧ ಕಾರ್ಯದ ಎಲ್ಲ ಪ್ರಯತ್ನಗಳು ನಡೆದಿದ್ದವು. ಒಂದೆರಡು ಸಲ ವಾಸನೆ ಬಂದಿತ್ತಾದರೂ ದೇಹ ಪತ್ತೆಯಾಗದೆ ಪ್ರಕರಣ ಕಗ್ಗಂಟಾಗಿತ್ತು. ಸತತ ಕಾರ್ಯಾಚರಣೆ ಬಳಿಕ ಇದೀಗ ಸನತ್ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವೈದ್ಯಕೀಯ ತಂಡ ಹಾಗೂ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!