ಪೆರ್ಡೂರು ಗ್ರಾ.ಪಂ. ಅಧ್ಯಕ್ಷ ದೇವು ಪೂಜಾರಿ ಬಿಜೆಪಿ ಸೇರ್ಪಡೆ
ಉಡುಪಿ : ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿ ಜಯಗಳಿಸಿರುವ ದೇವು ಪೂಜಾರಿಯವರು ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿ ನಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಶಾಸಕ ಲಾಲಾಜಿ ಆರ್ ಮೆಂಡನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ಪಕ್ಷದ ಧ್ವಜ ನೀಡಿ ದೇವು ಪೂಜಾರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಓಂತಿಬೆಟ್ಟು, ಪಕ್ಷದ ಮುಖಂಡರಾದ ಸುಧಾಕರ ಶೆಟ್ಟಿ, ಸುರೇಶ ಸೇರ್ವೇಗಾರ್, ಜಿಯಾನಂದ ಹೆಗ್ಡೆ, ಸತ್ಯಾನಂದ ನಾಯಕ್, ತಾಲೂಕು ಪಂಚಾಯತ್ ಸದಸ್ಯ ಸುಭಾಶ್ ನಾಯ್ಕ್ ಹಾಗೂ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.