ಕಾಪು: ರಸ್ತೆ ದಾಟುತ್ತಿದ್ದಾಗ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಸಾವು, ಚಾಲಕ ಪರಾರಿ
ಕಾಪು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಲ್ಲಾರು ಬಳಿ ನಡೆದಿದೆ.
ಯು. ಶಾಬುದ್ದೀನ್ ಸಾಹೇಬ್ ಮೃತಪಟ್ಟವರು. ಇವರು, ಫೆ.17 ರಂದು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಚಾಲಕ ಇವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಯು. ಶಾಬುದ್ದೀನ್ ಸಾಹೇಬ್ರವರು ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಶಾಬುದ್ದೀನ್ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.