ಮಂಗಳೂರು: ಸ್ಯಾನಿಟರಿ ನ್ಯಾಪ್ಕಿನ್ ನಲ್ಲಿ ಸಾಗಿಸುತ್ತಿದ್ದ ಅಕ್ರಮ 1ಕೆ.ಜಿ ಚಿನ್ನ ವಶಕ್ಕೆ
ಮಂಗಳೂರು: ಸ್ಯಾನಿಟರಿ ನ್ಯಾಪ್ಕಿನ್ ನಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 53.50 ಲಕ್ಷ. ರೂ. ಮೌಲ್ಯದ 1 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.