ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ಅಪಘಾತ-ಅಪಾಯದಿಂದ ಪಾರು
ರಾಮನಗರ: ನೈಸ್ ರಸ್ತೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರು ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿದೆ.
ಸಚಿವರು ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದರು. ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಿಂತಿರುಗುವ ಸಂದರ್ಭ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಆಯಿತು.
ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಸಚಿವರನ್ನು ಮತ್ತು ಕಾರು ಚಾಲಕನನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ
.