ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನ – ದೃಶ್ಯ ತೆಗೆಯಲು ಆಗ್ರಹ

ಬೆಂಗಳೂರು: ಧ್ರುವ ಸರ್ಜಾ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಪೊಗರು’ ಚಿತ್ರದ ಕೆಲ ದೃಶ್ಯಗಳ ಕುರಿತು ಆಕ್ಷೇಪ ವ್ಯಕ್ತವಾಗಿದೆ. ‘ಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡುವ ದೃಶ್ಯಗಳಿವೆ’ ಎಂದು ಆರೋಪಿಸಿರುವ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್‌.ಎಸ್‌.ಸಚ್ಚಿದಾನಂದ ಮೂರ್ತಿ, ‘ಆ ದೃಶ್ಯಗಳನ್ನು ತೆಗೆಯಬೇಕು’ ಎಂದು ಆಗ್ರಹಿಸಿದ್ದಾರೆ.

‘ಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿರುವುದು ನಿಜಕ್ಕೂ ಖಂಡನೀಯ. ಬ್ರಾಹ್ಮಣರು ತಿರುಗಿ ಬೀಳುವುದಿಲ್ಲ ಅನ್ನುವ ಆಲೋಚನೆ ಇದ್ದರೆ ಅದು ತಪ್ಪು ಕಲ್ಪನೆ. ಕೂಡಲೇ ಅವಹೇಳನಕಾರಿ ದೃಶ್ಯವನ್ನು ಚಿತ್ರದಿಂದ ತೆಗೆದು ಹಾಕಬೇಕೆಂದು ನಾನು ಆಗ್ರಹಿಸುತ್ತೇನೆ. ಫೆ.23ರಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸುತ್ತೇವೆ. ಮತ್ತು ಫೆ.24ರಂದು ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ’ ಎಂದು ಅವರು ತಿಳಿಸಿದರು.

ಚಿತ್ರದಲ್ಲೇ ಏನಿದೆ?: ಚಿತ್ರದ ಆರಂಭದಲ್ಲೇ ಯಜ್ಞ ಮಾಡುತ್ತಿದ್ದ ಪುರೋಹಿತರ ಮೇಲೆ ಖಳನಾಯಕನ ತಂಡದಲ್ಲಿದ್ದ ವ್ಯಕ್ತಿಯೊಬ್ಬ ಕಾಲಿಟ್ಟ ದೃಶ್ಯವಿದೆ. ಜೊತೆಗೆ ನಾಯಕನೇ ಬ್ರಾಹ್ಮಣರನ್ನು ಅವಹೇಳನ ಮಾಡುವ ಪದಗಳನ್ನು ಬಳಸಿದ್ದಾರೆ ಎನ್ನುವ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿವೆ. 

Leave a Reply

Your email address will not be published. Required fields are marked *

error: Content is protected !!