ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಗಳ ವಿಡಿಯೋ ಮಾಡುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ ಅಂದರ್!

ಬೆಂಗಳೂರು: ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಡ್ರೆಸ್ ಚೇಂಜ್ ಮಾಡುವುದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದ ಆರೋಪಿಯನ್ನು ಬೆಂಗಳೂರು ಪೆÇಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ 6 ವರ್ಷಗಳಿಂದ ಲ್ಯಾಬ್ ಟೆಕ್ನಿಷಿಯನ್ ಆಗಿರುವ ಮಾಲತೇಶ್(29) ಬಂಧಿತ ಆರೋಪಿ. ಈತ ಆಸ್ಪತ್ರೆಯ ಆಪರೇಷನ್ ರೂಂನಲ್ಲಿ ಹೆಚ್ಚಾಗಿ ಇರುತ್ತಿದ್ದ ಎನ್ನಲಾಗಿದ್ದು, ಈ ವೇಳೆ ಮೊಬೈಲ್ ಚಾರ್ಜ್ ಮಡುವ ನೆಪದಲ್ಲಿ ಮೊಬೈಲ್‍ನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವುದನ್ನು ರೆಕಾರ್ಡ್ ಮಾಡುತ್ತಿದ್ದ. ಈ ನಡುವೆ ಒಂದು ದಿನ ಮಹಿಳಾ ಸಿಬ್ಬಂದಿಯೊಬ್ಬರು ಚಾರ್ಜ್ ಗೆ ಇಟ್ಟಿದ್ದ ಮೊಬೈಲ್‍ನಲ್ಲಿ ಕ್ಯಾಮೆರಾ ಆನ್ ಆಗಿರುವುದನ್ನು ಗಮನಿಸಿದ್ದಾರೆ.

ಈ ವೇಳೆ ಮೊಬೈಲ್ ಪರಿಶೀಲಿಸಿದಾಗ ಈತನ ಕೃತ್ಯ ಬಯಲಾಗಿದೆ. ಕೂಡಲೇ ಈ ಬಗ್ಗೆ ಮಹಿಳಾ ಸಿಬ್ಬಂದಿ ಆಸ್ಪತ್ರೆಯ ಆಡಳಿತಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಆಸ್ಪತ್ರೆಯ ಆಡಳಿತ ಮಂಡಳಿಯವರು ಈತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ತಿಲಕ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!