ಕಾಂಗ್ರೆಸ್’ನ ಅಂಗಸಂಸ್ಥೆ ಪಿಎಫ್ಐ-ಎಸ್ ಡಿಪಿಐಗೆ ಮುಕ್ತಿ ಹಾಡುವ ಕಾಲ ಶೀಘ್ರದಲ್ಲೇ ಬರಲಿದೆ: ಬಿ.ವೈ ವಿಜಯೇಂದ್ರ

ಬೆಂಗಳೂರು: ದೇಶದ್ರೋಹಿ, ಮತಾಂಧ ಉಗ್ರಗಾಮಿಗಳ ಹುಟ್ಟಡಗಿಸಿ, ಕಾಶ್ಮೀರ ರಕ್ಷಿಸಿ, ಭಾರತದ ಸಾರ್ವಭೌಮತೆ, ಬಲಿಷ್ಠತೆಯನ್ನು ಸಾರಿದ ಬಿಜೆಪಿ ಬದ್ಧತೆ, ಸಾಮರ್ಥ್ಯ ಏನೆಂಬುದು ಜನತೆಗೆ ತಿಳಿದಿದೆ ಎಂದು ಬಿಜೆಪಿ ಯುವ ನಾಯಕ ಬಿ. ವೈ. ವಿಜಯೇಂದ್ರ ರಾಜಕೀಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.

ನಿಮ್ಮ ಕಾಂಗ್ರೆಸ್ ನ ಅಂಗಸಂಸ್ಥೆಗಳೇ ಆಗಿರುವ ಪಿಎಫ್ ಐ – ಎಸ್ ಡಿಪಿಐ ಸಂಘಟನೆಗಳಿಗೆ ಮುಕ್ತಿ ಹಾಡುವ ಕಾಲ ಶೀಘ್ರದಲ್ಲೇ ಬರಲಿದೆ, ನೋಡುತ್ತೀರಿ ಎಂದೂ ಅವರು ಟ್ವೀಟ್ ಮಾಡಿದ್ದಾರೆ.

ಸಂಘಟನೆಗಳ ಪೋಷಣೆ ಕಾಂಗ್ರೆಸ್ ನ ಹೊಣೆ’ ಎಂಬಂತೆ ಅವುಗಳ ಮೇಲಿದ್ದ ಕ್ರಿಮಿನಲ್ ಕೇಸ್ ಗಳನ್ನು ನಿಮ್ಮ ಅಧಿಕಾರವಧಿಯಲ್ಲಿ ವಾಪಸ್ಸು ಪಡೆದುಕೊಂಡಿರಿ. ಈ ಪಾಪ ಕಾರ್ಯಕ್ಕೆ ರಾಜ್ಯದ ಜನತೆ ನಿಮಗೆ ತಕ್ಕ ಪಾಠಕಲಿಸಿದ್ದನ್ನು ನೀವು ಮರೆತಂತೆ ಕಾಣುತ್ತದೆ. ಎಲ್ಲವನ್ನೂ ರಾಜಕೀಯದ ಹಳದಿ ಕಣ್ಣಿನಿಂದ ನೋಡಬೇಡಿ  ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!