ಟೂಲ್ ಕಿಟ್ ಪ್ರಕರಣ: ಪರಿಸರ ಹೋರಾಟಗಾರ್ತಿ ದಿಶಾ ರವಿಗೆ ಜಾಮೀನು
ನವದೆಹಲಿ: ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ್ತಿ ಬೆಂಗಳೂರಿನ ದಿಶಾ ರವಿಗೆ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂದಿಸಿದಂತೆ ದಿಶಾ ರವಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರು ಶ್ಯೂರಿಟಿ ನೀಡಬೇಕು ಮತ್ತು 1 ಲಕ್ಷ ರೂ. ಬಾಂಡ್ ಪಾವತಿಸಬೇಕು ಎಂಬ ಷರತ್ತಿನ ಮೇರೆಗೆ ಜಾಮೀನು ಮಂಜೂರು ಮಾಡಿದೆ.
ಸ್ವಿಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಿಶಾ ರವಿಯನ್ನ ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯ ಬಂಧಿತ ದಿಶಾನನ್ನು ಐದು ದಿನ ಪೊಲೀಸರ ವಶಕ್ಕೆ ನೀಡಿತ್ತು. ಇದೀಗ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಸೆಶನ್ ಕೋರ್ಟ್ ಜಡ್ಜ್ ಧಮೇರ್ಂದ್ರ ರಾಣಾ ಅವರು ಜಾಮೀನು ನೀಡಿದ್ದಾರೆ.