ಯಕ್ಷ ಆರಾಧನಾ ಕಿದಿಯೂರು ಟ್ರಸ್ಟ್: ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ
ಉಡುಪಿ: ಯಕ್ಷ ಆರಾಧನಾ ಕಿದಿಯೂರು ಟ್ರಸ್ಟಿನ ವತಿಯಿಂದ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಸಮಾರಂಭವು ಫೆ.21ರಂದು ಕಿದಿಯೂರಿನ ಶ್ರೀವಿದ್ಯಾ ಸಮುದ್ರ ತೀರ್ಥ ಪ್ರೌಢ ಶಾಲೆಯಲ್ಲಿ ನಡೆಯಿತು.
ತರಬೇತಿ ಕಾರ್ಯಕ್ರಮವನ್ನು ಪ್ರೊ. ರಾಧಾಕೃಷ್ಣ ಆಚಾರ್ಯದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕಿದಿಯೂರಿನ ಉದಯ ಕುಮಾರ್ ಶೆಟ್ಟಿ ಅವರು ಮಾತನಾಡಿ. ಮುಂದಿನ ಪೀಳಿಗೆಯ ಮಕ್ಕಳಿಗೆ ಯಕ್ಷಗಾನ ನಾಟ್ಯ ಕಲಿಸಿ ಕೊಟ್ಟು ಕೆ.ಜೆ.ಸಹೋದರರು ಯಕ್ಷಗಾನವನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಕಾರ್ಯಕ್ರಮದಲ್ಲಿ ವಿಜಯ್ ಕುಮಾರ್ ಮುದ್ರಾಡಿ, ಖ್ಯಾತ ಸ್ತ್ರೀ ವೇಷಧಾರಿ ಕರುಣಾಕರ ಶೆಟ್ಟಿ ಅವರು ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಿದಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾದ ರೋಹಿಣಿ ಕಪ್ಪೆಟ್ಟು ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ದೀಪ್ತ ಕಿದಿಯೂರು, ಟ್ರಸ್ಟಿಗಳಾದ ಕೆ.ಜೆ.ಗಣೇಶ್, ಕೆ.ಜೆ.ಕೃಷ್ಣ, ಕೆ.ಜೆ.ಸುಧೀಂದ್ರ ಮೊದಲಾದವರು ಉಪಸ್ಥಿತರಿದ್ದರು