ಫೆ.27ರ ಸಮಾಪನ ಸಭೆಗೆ ಡಿ.ಕೆ. ಶಿವಕುಮಾರ್ ಬೈಂದೂರಿಗೆ
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೈತ ವಿರೋಧಿ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಜನಧ್ವನಿ ಪಾದಯಾತ್ರೆಯು ಫೆ. 27ರಂದು ಶನಿವಾರ ಸಂಜೆ ಗಂಟೆ 3 ಕ್ಕೆ ಬೈಂದೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯೊಂದಿಗೆ ಸಮಾಪನಗೊಳ್ಳಲಿದೆ.
ಸಮಾಪನ ಸಭೆಯನ್ನು ಉದ್ದೇಶಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ರವರು ಮಾತನಾಡಲಿರುವರು. ಪಕ್ಷದ ಹಲವಾರು ರಾಜ್ಯ ಹಾಗೂ ಜಿಲ್ಲೆಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.