ಕುಂದಾಪುರ: ಆಕಸ್ಮಿಕವಾಗಿ ಕುಸಿದು ಬಿದ್ದು ಹೋಟೆಲ್ ಕಾರ್ಮಿಕ ಮೃತ್ಯು
ಕುಂದಾಪುರ: ಆಕಸ್ಮಿಕವಾಗಿ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.
ಪ್ರಕಾಶ್ (38) ಮೃತಪಟ್ಟವರು. ಇವರು ಬೆಂಗಳೂರಿನಲ್ಲಿ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಊರಿಗೆ ಬಂದಿದ್ದ ಇವರು, ಫೆ.24 ರಂದು ಜಪ್ತಿ ಗ್ರಾಮದ ದಬ್ಬೆಕಟ್ಟೆಯ ಹೆಂಡತಿ ಮನೆಯಲ್ಲಿರುವಾಗ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.