ಜೂ.ಅಥ್ಲೆಟಿಕ್ ಚಾಂಪಿಯನ್ ಶಿಪ್: ಅಲೆವೂರು ಶಾಂತಿನಿಕೇತನ ಶಾಲೆಯ ಅಂಕಿತಾಗೆ ಚಿನ್ನದ ಪದಕ
ಉಡುಪಿ: ಕೇರಳದ ಕ್ಯಾಲಿಕಟ್‌ನಲ್ಲಿ ನಡೆದ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅಂಕಿತಾ ದೇವಾಡಿಗ 100 ಮೀಟರ್ ಓಟದ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾಳೆ. ಆಕೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಶರತ್ ಎಚ್.ಎಸ್. ಹಾಗೂ ಅಜ್ಜರಕಾಡು ಕ್ರೀಡಾಂಗಣದಲ್ಲಿ ಕೋಚ್ ಅಬ್ಬಾಸ್ ಅವರಿಂದ ತರಬೇತಿ ಪಡೆಯುತ್ತಿದ್ದಾಳೆ.
ಶಾಂತಿನಿಕೇತನ ಶಾಲೆಯ ಶಶಾಂಕ್ ಬಿ. ಹಾಗೂ ಪ್ರಶುಲ್ ಪಿ. ಪೂಜಾರಿ ಹೈಜಂಪ್ ವಿಭಾಗದಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ವಿಜೇತರಿಗೆ ಶಾಲಾ ಸಂಚಾಲಕ ಅಲೆವೂರು ದಿನೇಶ್ ಕಿಣಿ ಹಾಗೂ ಮುಖ್ಯೋಪಾಧ್ಯಾಯಿನಿ ರೂಪಾ ಡಿ. ಕಿಣಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.