ಸ್ಕೂಟರ್ ನಲ್ಲಿ ಬೆನ್ನಟ್ಟಿ ಅಕ್ರಮ ಮರಳು ಸಾಗಾಟಗಾರರನ್ನು ಬಂಧಿಸಿದ ಪೊಲೀಸ್ ಕಮೀಷನರ್ ಮತ್ತು ಡಿಸಿಪಿ
ಮಂಗಳೂರು: ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಅವರು ಸ್ಕೂಟರ್ನಲ್ಲಿ ಬಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ಅಡ್ಡ ಹಾಕಿದ ಅಧಿಕಾರಿಗಳು, ಲಾರಿ ಚಾಲಕನನ್ನು ವಶಕ್ಕೆ ಪಡೆದರು. ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನಗಳನ್ನು ಜಪ್ತಿ ಮಾಡಲಾಗುತ್ತಿತ್ತು, ಈ ವೇಳೆ ಲಾರಿಗೆ ಎಸ್ಕಾರ್ಟ್ ನಡೆಸುತ್ತಿದ್ದ ಚಂದ್ರ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.