ಕಾರ್ಕಳ: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಪ್ರಕಾಶ (40) ಆತ್ಮಹತ್ಯೆ ಮಾಡಿಕೊಂಡವರು. ಇವರು, ಒಂದು ವರ್ಷದಿಂದ ಪಾಶ್ರ್ವವಾಯು ಖಾಯಿಲೆಯಿಂದ ಬಳಲುತ್ತಿದ್ದರು.

ಯಾವುದೇ ಕೆಲಸ ಮಾಡಲು ಸಾಧ್ಯವಾಗದೆ ಮನೆಯಲ್ಲೇ ಇದ್ದರು. ಇದರಿಂದ ಮನನೊಂದು  ಫೆ.27 ರಂದು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!